Publish Date: Tue, 04 Jun 2024 (13:21 IST)
Updated Date: Tue, 04 Jun 2024 (13:25 IST)
ಚಿಕ್ಕಬಳ್ಳಾಪುರ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ. ಕೆ. ಸುಧಾಕರ್ ಗೆದ್ದರೆ ತನ್ನ ಶಾಸಕ ಸ್ಥಾನಕ್ಕೇ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ನ ಪ್ರದೀಪ್ ಈಶ್ವರ್ ನೀಡಿದ್ದ ಹೇಳಿಕೆ ಈಗ ವೈರಲ್ ಆಗಿದೆ.
ಚಿಕ್ಕಬಳ್ಳಾಪುರದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡಾ ಕೆ ಸುಧಾಕರ್ ರನ್ನು ಸೋಲಿಸಿ ಪ್ರದೀಪ್ ಈಶ್ವರ್ ಶಾಸಕರಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ 7 ಕಾಂಗ್ರೆಸ್ ಶಾಸಕರಿದ್ದರೂ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸುಧಾಕರ್ ಯಶಸ್ವಿಯಾಗಿದ್ದಾರೆ.
ಚುನಾವಣೆ ಪ್ರಚಾರ ಸಂದರ್ಭದಲ್ಲಿ ಸುಧಾಕರ್ ಸೋಲುವುದು ನಿಶ್ಚಿತ. ಒಂದು ವೇಳೆ ಗೆದ್ದರೆ ನನ್ನ ಶಾಸಕ ಸ್ಥಾನಕ್ಕೇ ರಾಜೀನಾಮೆ ನೀಡುವುದಾಗಿ ಶಪಥ ಮಾಡಿದ್ದರು. ಇದೀಗ ಸುಧಾಕರ್ ಗೆದ್ದ ಬೆನ್ನಲ್ಲೇ ಬಿಜೆಪಿ ಬೆಂಬಲಿಗರು ಪ್ರದೀಪ್ ಈಶ್ವರ್ ಗೆ ಈ ವಿಚಾರವನ್ನು ನೆನಪಿಸಿದ್ದಾರೆ.
ಗೆಲುವಿನ ಸಂಭ್ರಮದಲ್ಲಿ ಮಾತನಾಡಿದ ಸುಧಾಕರ್, ತಮ್ಮ ಗೆಲುವಿಗೆ ಮೈತ್ರಿ ಪಕ್ಷ ಜೆಡಿಎಸ್ ನಾಯಕ ಕುಮಾರಸ್ವಾಮಿ ಕೊಡುಗೆಯೂ ಇದೆ ಎಂದಿದ್ದಾರೆ. ಕುಮಾರಸ್ವಾಮಿ ನನ್ನನ್ನು ತಮ್ಮ ಸ್ವಂತ ಪಕ್ಷದ ಅಭ್ಯರ್ಥಿಯಂತೆ ನೋಡಿಕೊಂಡರು ಎಂದಿದ್ದಾರೆ.