Select Your Language

Notifications

webdunia
webdunia
webdunia
webdunia

ಕೊರೋನಾಗೆ ಚಿಕಿತ್ಸೆ ಪಡೆಯಲು ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಆದ ಶಾಸಕ ರೇಣುಕಾಚಾರ್ಯ

ಕೊರೋನಾಗೆ ಚಿಕಿತ್ಸೆ ಪಡೆಯಲು ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಆದ ಶಾಸಕ ರೇಣುಕಾಚಾರ್ಯ
ಬೆಂಗಳೂರು , ಮಂಗಳವಾರ, 20 ಏಪ್ರಿಲ್ 2021 (09:39 IST)
ಬೆಂಗಳೂರು: ಕೊರೋನಾ ದೃಢವಾದ ಬಳಿಕ ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ರೇಣುಕಾಚಾರ್ಯ ದೇಹಾರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.

 

ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೇಣುಕಾಚಾರ್ಯ ಆರೋಗ್ಯ ಸುಧಾರಿಸದ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. ಎರಡು ದಿನಗಳ ಹಿಂದೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು.

ಅದಾದ ಬಳಿಕ ಅವರು ಒಂದು ದಿನ ಹೋಂ ಕ್ವಾರಂಟೈನ್ ನಲ್ಲಿದ್ದರು. ಆದರೆ ವೈದ್ಯರ ಸಲಹೆ ಮೇರೆಗೆ ಬಳಿಕ ದಾವಣಗೆರೆ ಜಿಲ್ಲಾಸ್ಪತ್ರೆಗೆ ಶಿಫ್ಟ್ ಆಗಿದ್ದರು. ಅಲ್ಲಿಯೂ ಆರೋಗ್ಯ ಸುಧಾರಿಸದ ಕಾರಣ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿಯಲ್ಲಿ ಲಾಕ್ ಡೌನ್: ಮದ್ಯದಂಗಡಿ ಮುಂದೆ ಜನರ ಕ್ಯೂ