Publish Date: Sat, 23 Jul 2016 (18:37 IST)
Updated Date: Sat, 23 Jul 2016 (18:41 IST)
ಶಾಸಕರು ತಮ್ಮ ಕ್ಷೇತ್ರದ ಮತದಾರರಿಗೆ ರಜನಿಕಾಂತ್ ಅಭಿನಯದ ಕಬಾಲಿ ಸಿನಿಮಾ ಟಿಕೆಟ್ ವಿತರಣೆ ಮಾಡಿರುವುದು ಖಂಡನೀಯ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಓಲೈಕೆಗಾಗಿ ಶಾಸಕರು ತಮ್ಮ ಕ್ಷೇತ್ರದ ಜನರಿಗೆ ಬಾಲಿ ಸಿನಿಮಾ ಟಿಕೆಟ್ ವಿತರಣೆ ಮಾಡಿರುವುದು ನಾಚಿಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಕೇತ್ರದ ಜನರಿಗೆ ನಾನು ಟಿಕೆಟ್ ವಿತರಣೆ ಮಾಡಿದ್ದೇನೆ ಎನ್ನುವ ಶಾಸಕರ ಹೇಳಿಕೆ ಸರಿಯಲ್ಲ ಎಂದು ತಿಳಿಸಿದರು.
ಶಾಸಕರು ಮತದಾರರಿಗೆ ಕಬಾಲಿ ಸಿನಿಮಾ ಟಿಕೆಟ್ ನೀಡಿರುವದನ್ನು ಖಂಡಿಸಿ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜೊತೆ ಚರ್ಚೆ ನಡೆಸುತ್ತೇನೆ. ಶಾಸಕರ ನಡೆ ಖಂಡಿಸಿ ಪ್ರತಿಭಟನೆ ನಡೆಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ