ನಿಗಮ, ಮಂಡಳಿ ಅಧ್ಯಕ್ಷತೆ ಕುರಿತಂತೆ ಯಾವುದೇ ಶಾಸಕರು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೇಮಕಾತಿಯಲ್ಲಿ ಯಾವುದೇ ಅಪಸ್ವರವಿಲ್ಲ. ಹೈಕಮಾಂಡ್ ನಿರ್ಧಾರವನ್ನು ಪ್ರತಿಯೊಬ್ಬ ಶಾಸಕರು ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ.
ಶಾಸಕ ಎನ್.ವೈ.ಗೋಪಾಲಕೃಷ್ಣ ನಿಗಮದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದಿಲ್ಲ ಎಂದು ಎಲ್ಲೂ ಹೇಳಿಲ್ಲ. ಏನಾದರೂ ತೊಂದರೆಗಳಿದ್ದರೆ ಸರಿಪಡಿಸುತ್ತೇವೆ ಎಂದರು.
ಕರ್ನಾಟಕ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಬಗ್ಗೆ
ಬೆಳಗಾವಿ ಜಿಲ್ಲಾಧಿಕಾರಿ ವರದಿ ನೀಡಿದ್ದು, ವರದಿಯನ್ನು ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಕೂಡಾ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡಿರುವುದು ಕಂಡು ಬಂದಿದೆ. ಮುಂಬರುವ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ