Publish Date: Fri, 13 Oct 2017 (17:42 IST)
Updated Date: Fri, 13 Oct 2017 (17:44 IST)
ಕಾಂಗ್ರೆಸ್ ಪಕ್ಷದಿಂದ ಶಾಸಕ ಎಸ್.ಪಾಟೀಲ್ ನಡಹಳ್ಳಿ ಉಚ್ಚಾಟಿಸಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.
ಕಳೆದ 2015ರ ಏಪ್ರಿಲ್ 23 ರಂದೇ ಶಾಸಕ ಎಸ್.ಪಾಟೀಲ್ ನಡಹಳ್ಳಿಯನ್ನು ಅಮಾನತುಗೊಳಿಸಲಾಗಿತ್ತು.
ದೇವರಹಿಪ್ಪರಗಿ ಕ್ಷೇತ್ರದ ಶಾಸಕ ನಡಹಳ್ಳಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮೊದಲು ನೋಟಿಸ್ ನೀಡಲಾಗಿತ್ತು ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಆದರೆ, ಶಾಸಕ ನಡಹಳ್ಳಿ ನೋಟಿಸ್‌ಗೆ ಕ್ಯಾರೆ ಎನ್ನದೆ ಮತ್ತೆ ಹೇಳಿಕೆ ನೀಡಲು ಮುಂದುವರಿಸಿದ್ದರಿಂದ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದೀಗ ಶಾಸಕ ನಡಹಳ್ಳಿಯನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಶಿಸ್ತು ಕ್ರಮ ಕೈಗೊಂಡಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.