Publish Date: Wed, 03 Oct 2018 (13:57 IST)
Updated Date: Wed, 03 Oct 2018 (13:59 IST)
ಬೆಂಗಳೂರು : ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಭದ್ರಾವತಿ ಶಾಸಕ ಸಂಗಮೇಶ್ ಬೆಂಬಲಿಗರು ಬುಧವಾರ (ಇಂದು) ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಅಕ್ಟೋಬರ್ 10 ಅಥವಾ 12ರಂದು ವಿಸ್ತರಣೆಯಾಗುವುದು ಖಚಿತವಾಗಿದೆ. ಹಾಗೇ ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ಪೈಪೋಟಿ ಮುಂದುವರೆದಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಆಯ್ಕೆಯಾಗಿರುವ ಏಕೈಕ ಕಾಂಗ್ರೆಸ್ ಶಾಸಕ ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆಗೆ ಪಕ್ಷ ಬಲಪಡಿಸಬೇಕು. ನಾವು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕೆಂದರೆ ಸಚಿವ ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.