Publish Date: Tue, 10 Apr 2018 (11:08 IST)
Updated Date: Tue, 10 Apr 2018 (11:09 IST)
ಬೆಂಗಳೂರು: ಶಾಸಕ ಎನ್ ತಿಪ್ಪೇಸ್ವಾಮಿಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಅವರ ಸ್ವಗ್ರಾಮ ನೇರಲಗುಂಟೆಯಲ್ಲಿ ಬೆಂಬಲಿಗರು ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ತಿಪ್ಪೇಸ್ವಾಮಿಗೆ ಟಿಕೆಟ್ ನೀಡಲಾಗಿಲ್ಲ. ಟಿಕೆಟ್ ನೀಡಬೇಕೆಂದು ಸ್ವತಃ ತಿಪ್ಪೇಸ್ವಾಮಿಯವರೇ ಬಿಜೆಪಿ ನಾಯಕರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
ಈ ಹಿನ್ನಲೆಯಲ್ಲಿ ಶಾಸಕರ ಬೆಂಬಲಿಗರು ಸ್ವಗ್ರಾಮದಲ್ಲಿ ರಸ್ತೆ ತಡೆ ನಡೆಸಿ ಬಿಜೆಪಿ ನಾಯಕರ ಮೇಲೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ತಿಪ್ಪೇಸ್ವಾಮಿ ಬೇರೆ ಆಯ್ಕೆಗಳ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ವದಂತಿಯೂ ಇದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.