Publish Date: Wed, 26 Jul 2017 (09:59 IST)
Updated Date: Wed, 26 Jul 2017 (10:03 IST)
ಬೆಂಗಳೂರು: ಮಹಾಮಾರಿ ಡೆಂಗ್ಯೂ ಇದೀಗ ರಾಜ್ಯದಲ್ಲಿ ವ್ಯಾಪಕವಾಗಿದೆ. ಇದೀಗ ಕೋಲಾರ ಶಾಸಕ ವರ್ತೂರ್ ಪ್ರಕಾಶ್ ಪತ್ನಿ ಶ್ಯಾಮಲಾ ಡೆಂಗ್ಯೂ ಜ್ವರದಿಂದಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶ್ಯಾಮಲಾ ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ದೇಶದೆಲ್ಲೆಡೆ ಡೆಂಗ್ಯೂ ಜ್ವರ ವ್ಯಾಪಕವಾಗಿದ್ದು, ಅದನ್ನು ತಡೆಗಟ್ಟು ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಹಾಗಿದ್ದರೂ, ಶಾಸಕರ ಪತ್ನಿಯೇ ಈ ಮಹಾಮಾರಿಗೆ ಬಲಿಯಾಗಿರುವುದು ಆತಂಕ ಸೃಷ್ಟಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ