ಯಲಹಂಕ ಶಾಸಕರ ಹತ್ಯೆಗೆ ಸ್ಕೆಚ್ ಆರೋಪಿ ಅರೆಸ್ಟ್

Webdunia
ಗುರುವಾರ, 2 ಡಿಸೆಂಬರ್ 2021 (14:04 IST)
ಶಾಸಕ ಎಸ್.ಅರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಕುಳ್ಳ ದೇವರಾಜ್ ನನ್ನು ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ.
 
ವಿಚಾರಣೆಗೆ ಕರೆಸಿದ ಪೊಲೀಸರು ಕುಳ್ಳ ದೇವರಾಜ್ ನನ್ನು ಬಂಧನ ಪ್ರಕ್ರಿಯೆ ಮುಗಿಸಿದ್ದಾರೆ.ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿಕೃಷ್ಣ, ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಕುಳ್ಳ ದೇವರಾಜ್‌ನನ್ನು ಅರೆಸ್ಟ್ ಮಾಡಿದ್ದೇವೆ. ಎಸ್.ಆರ್.ವಿಶ್ವನಾಥ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಅವರ ಬಳಿ ಇದ್ದ ದಾಖಲೆಗಳನ್ನು ತನಿಖೆಗೆ ಹಾಜರು ಪಡಿಸಿದ್ದಾರೆ. ಅದರ ಆಧಾರದ ಮೇಲೆ ಕುಳ್ಳ ದೇವರಾಜ್ ನನ್ನು ವಿಚಾರಣೆಗೆ ಕರೆಸಿ ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ. ಇನ್ನು ಬಂಧಿತ ಆರೋಪಿ ಕುಳ್ಳ ದೇವರಾಜ್ ನನ್ನು ಮಹಜರು ನಡೆಸಲು ಇನ್‌ಸ್ಪೆಕ್ಟರ್ ನವೀನ್ ನೇತೃತ್ವದಲ್ಲಿ ಯಲಹಂಕ ಕಡೆ ಕರೆದೊಯ್ಯಲಾಗಿದೆ.
 
ಕುಳ್ಳ ದೇವರಾಜ್ ಜತೆ ಸಂಭಾಷಣೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜಾನುಕುಂಟೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಕುಳ್ಳ ದೇವರಾಜ್ ಜತೆ ಸಂಭಾಷಣೆ ಮಾಡಿರುವ ವಿಡಿಯೋ, ಅಡಿಯೋ ಆಧರಿಸಿ ಗೋಪಾಲಕೃಷ್ಣ ಹೇಳಿಕೆ ಪಡೆಯಲಿದ್ದಾರೆ. ವಿಚಾರಣೆಯಲ್ಲಿ ಹತ್ಯೆಗೆ ಸಂಚು ರೂಪಿಸಿದ್ದು ದೃಢಪಟ್ಟರೆ ಅತನನ್ನು ಬಂಧಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಯಾವ ನಾಯಿ ಯಾವ ಮನಸ್ಥಿತಿಯಲ್ಲಿದೆ ಎಂದೂ ಯಾರಿಗೂ ತಿಳಿದಿಲ್ಲ: ಸುಪ್ರೀಂಕೋರ್ಟ್‌

ಬಿಹಾರ: ಹಿಜಾಬ್ ಧರಿಸಿ ಬಂದ್ರೆ ಇನ್ಮುಂದೆ ಆಭರಣದ ಅಂಗಡಿಗೆ ಎಂಟ್ರಿಯಿಲ್ಲ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments