Publish Date: Sun, 20 Jan 2019 (11:04 IST)
Updated Date: Sun, 20 Jan 2019 (11:06 IST)
ಬೆಂಗಳೂರು : ಮಾಜಿ ಸಿಎಂ ಸಿದ್ಧರಾಮಯ್ಯ ಬಳಿ ಕೈ ಶಾಸಕರು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾತ್ರಿ ರೆಸಾರ್ಟ್ ನಲ್ಲಿ ಸಿದ್ಧರಾಮಯ್ಯ ಬಳಿ 20 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿಗಳನ್ನು ಬದಲಾಯಿಸಬೇಕು, ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ.
ಕುಮಾರಸ್ವಾಮಿ ಜೆಡಿಎಸ್ ಶಾಸಕರಿಗೆ ಮಾತ್ರ ಆದ್ಯತೆ ನೀಡುತ್ತಾರೆ. 80 ಸ್ಥಾನ ಗೆದ್ದ ಕಾಂಗ್ರೆಸ್ ಶಾಸಕರಿಗೆ ಯಾವುದೇ ಬೆಲೆ ಇಲ್ಲವಾಗಿದೆ. ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೊಡುತ್ತಿಲ್ಲ. ಮುಖ್ಯಮಂತ್ರಿಗಳು ಕಾಂಗ್ರೆಸ್ ಶಾಸಕರನ್ನು ಕಡೆಗಣಿಸುತ್ತಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಕೆಲಸಗಳು ನಡೆಯುತ್ತಿಲ್ಲ ಎಂದು 20 ಕ್ಕೂ ಹೆಚ್ಚು ಕೈ ಶಾಸಕರು ಸಿದ್ಧರಾಮಯ್ಯ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.