Publish Date: Sun, 20 Jan 2019 (10:49 IST)
Updated Date: Sun, 20 Jan 2019 (10:51 IST)
ಬೆಂಗಳೂರು : ಅಪರೇಷನ್ ಕಮಲದ ಭಯಕ್ಕೆ ಈಗಲ್ಟನ್ ರೆಸಾರ್ಟ್ ನಲ್ಲಿ ಇರಿಸಲಾದ ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ ನಡೆದಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಬಳ್ಳಾರಿ ಜಿಲ್ಲೆಯ ವಿಚಾರ ಚರ್ಚೆಯ ವೇಳೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ನಡುವೆ ಗಲಾಟೆ ನಡೆದಿದ್ದು, ಆ ವೇಳೆ ಅವರು ಕೈಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ.
ಕೈ ಶಾಸಕರ ಮಧ್ಯೆ ನಡೆದ ಗಲಾಟೆಯ ಕುರಿತು ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ‘ಕುಟುಂಬದ ಜತೆ ಆನಂದ್ ಸಿಂಗ್ ಮದುವೆಗೆ ಹೋಗಿದ್ದಾರೆ. ಯಾವುದೇ ರೀತಿಯ ಗಲಾಟೆ ನಡೆದಿಲ್ಲ. ಬಳ್ಳಾರಿ ಜಿಲ್ಲೆಯ ಕೈ ಶಾಸಕರಲ್ಲಿ ಯಾವುದೇ ಮನಸ್ತಾಪವಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.