Webdunia - Bharat's app for daily news and videos

Install App

ಜಗತ್ತಿನ ಯಾವುದೇ ಸಂಸ್ಥೆಯಿಂದ ತನಿಖೆ ನಡೆಸಲಿ ಎಂದ ಶಾಸಕ

Webdunia
ಗುರುವಾರ, 14 ಮಾರ್ಚ್ 2019 (14:36 IST)
ನಾನು ದುಡ್ಡು ಪಡೆದುಕೊಂಡಿದ್ದು ನಿಜವೇ ಆಗಿದ್ದಲ್ಲಿ ಜಗತ್ತಿನ ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಿ ಎಂದು ಕೈ ಪಾಳೆಯಕ್ಕೆ ರಾಜೀನಾಮೆ ನೀಡಿರುವ ಶಾಸಕ ಸವಾಲು ಹಾಕಿದ್ದಾರೆ.

ಸ್ಪೀಕರ್  ರಮೇಶ್ ಕುಮಾರ್ ಯಾರ ಒತ್ತಡಕ್ಕೂ ಮಣಿಯಲ್ಲ. ನ್ಯಾಯಬದ್ಧವಾಗಿ ಕೆಲಸ ನಿರ್ವಹಿಸಲಿದ್ದಾರೆ.  ರಾಜೀನಾಮೆ ಡಿಲೇ ಯಾಕೆ ಆಗ್ತಾ ಇದೆಯೋ ಗೊತ್ತಿಲ್ಲ. ಶೀಘ್ರವೇ ರಾಜೀನಾಮೆ ಅಂಗೀಕಾರವಾಗಲಿದೆ ಅನ್ನೋ ವಿಶ್ವಾಸವಿದೆ. ಹೀಗಂತ ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಶಾಸಕ ಉಮೇಶ್ ಜಾಧವ ಹೇಳಿದ್ದಾರೆ.

ರಾಜೀನಾಮೆ ಅಂಗೀಕಾರವಾಗದಿದ್ದರೂ ಲೋಕಸಭೆ ಚುನಾವಣೆಗೆ ನಿಲ್ತೇನೆ. ಸಂವಿಧಾನ ನೀಡಿರೋ ಹಕ್ಕು, ಹೀಗಾಗಿ ನಾನು ಬಿಜೆಪಿಯಿಂದ ಸ್ಪರ್ಧಿಸುತ್ತೇನೆ ಎಂದು ಉಮೇಶ್ ಜಾಧವ್ ಹೇಳಿದ್ದಾರೆ.
ಉಮೇಶ್ ಜಾಧವ್ ಚಿಂಚೋಳಿ ಶಾಸಕರಾಗಿದ್ದಾರೆ. ನಾನು ದುಡ್ಡು ತೆಗೆದುಕೊಂಡಿದ್ದೇನೆ ಎನ್ನೋದಾದ್ರೆ ಜಗತ್ತಿನ ಯಾವುದೇ ಸಂಸ್ಥೆಯಿಂದ ತನಿಖೆ ನಡೆಸಲಿ. ಅವರ ಮನೆಯವರ ಮೇಲೆ ಆಣೆ ಮಾಡಲಿ, ನಾನು ಮಾಡುತ್ತೇನೆ.  

ಸುಳ್ಳು ಆರೋಪ ಮಾಡಿ, ತೇಜೋವಧೆ ಮಾಡೋದು ಸರಿಯಲ್ಲ. ತನ್ನನ್ನು ದತ್ತುಪುತ್ರನನ್ನಾಗಿ ಸ್ವೀಕರಿಸುವಂತೆ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಜಾಧವ್, ಪ್ರಿಯಾಂಕ್ ಖರ್ಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚಿಂಚೋಳಿಯಲ್ಲಿ ಸ್ಪರ್ಧಿಸಲಿ. ಅಲ್ಲಿ ಗೆದ್ದು ದತ್ತುಪುತ್ರನಾಗಲಿ ಎಂದು ವ್ಯಂಗ್ಯವಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments