Publish Date: Tue, 09 Mar 2021 (09:29 IST)
Updated Date: Tue, 09 Mar 2021 (09:31 IST)
ಬೆಂಗಳೂರು: ಸಿಡಿ ವಿವಾದದಿಂದಾಗಿ ರಾಜೀನಾಮೆ ನೀಡಿರುವ ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿ ಸ್ಥಾನವನ್ನು ಅವರ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ನೀಡುವಂತೆ ಶಾಸಕರು ಸಿಎಂ ಮೇಲೆ ಒತ್ತಡ ಹೇರಿದ್ದಾರೆ.
ನಿನ್ನೆ 14 ಜನ ಶಾಸಕರ ತಂಡ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ರಮೇಶ್ ಜಾರಕಿಹೊಳಿ ಹೊಂದಿದ್ದ ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿಗೆ ನೀಡುವಂತೆ ಒತ್ತಾಯಿಸಿದ್ದಾರೆ.
ಈ ಮೊದಲು ರಮೇಶ್ ಜಾರಕಿಹೊಳಿ ಕೂಡಾ ರಾಜೀನಾಮೆ ನೀಡುವಾಗ ತನ್ನ ಖಾತೆಯನ್ನು ತಮ್ಮನಿಗೆ ನೀಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ. ಇದೀಗ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಒತ್ತಾಯ ಹೆಚ್ಚಿದ್ದು ಸಿಎಂ ನಿರ್ಧಾರ ಕೈಗೊಳ್ಳಬೇಕಿದೆ.
ಸದ್ಯಕ್ಕೆ ರಾಸಲೀಲೆ ವಿವಾದದಲ್ಲಿ ಸಿಲುಕಿರುವ ರಮೇಶ್ ಜಾರಕಿಹೊಳಿಗೆ ಆರೋಪ ಮುಕ್ತರಾಗದೇ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲೂ ಆಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಅವರ ಸ್ಥಾನವನ್ನು ಇನ್ನೊಬ್ಬರಿಗೆ ನೀಡುವ ಬಗ್ಗೆ ಸಿಎಂ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಾದುನೋಡಬೇಕಿದೆ.