Select Your Language

Notifications

webdunia
webdunia
webdunia
webdunia

ವಿ.ಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿ.ಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು , ಶನಿವಾರ, 28 ಮೇ 2016 (20:34 IST)
ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಸ್ಪರ್ಧಿಸಲು ರಾಜ್ಯ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
 
ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಅಲ್ಲಂ ವೀರಭದ್ರಪ್ಪ, ಆರ್‌.ಬಿ.ತಿಮ್ಮಪೂರ್, ರಿಜ್ವಾನ್ ಅರ್ಷದ್ ಮತ್ತು ವೀನಾ ಅಚ್ಚಯ್ಯ ಅವರ ಹೆಸರು ಅಂತಿಮಗೊಂಡಿದೆ.
 
ಜೆಡಿಎಸ್ ಬಂಡಾಯ ಶಾಸಕ ಚಲುವರಾಯಸ್ವಾಮಿ ಮತ್ತು ರಾಜ್ಯಸಭೆ ಟಿಕೆಟ್ ಆಕಾಂಕ್ಷಿ ಕೆ.ಸಿ.ರಾಮಮೂರ್ತಿ ಸೇರಿದಂತೆ ಹಲವು ಮುಖಂಡರಿಂದ ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆ ಕುರಿತು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸಭೆ ನಡೆಯಿತು.
 
ಮುಖಂಡರ ಸಭೆಯ ನಂತರ ಮಾತನಾಡಿದ ಕುಡುಚಿ ಕ್ಷೇತ್ರದ ಬಿಎಸ್‌ಆರ್‌ಪಿಸಿ ಶಾಸಕ ಪಿ.ರಾಜೀವ್, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷೇತ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇವೆ ಎಂದು ಭರವಸೆ ನೀಡಿದ ಮೇರೆಗೆ ನಾವು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಆಹಾರ ಪದಾರ್ಥಗಳಲ್ಲಿ ರಾಸಾಯನಿಕ ಬಳಕೆ: ತನಿಖೆಗೆ ಸಚಿವ ಖಾದರ್ ಆದೇಶ