Daily Horoscope

Select Your Language

Notifications

webdunia
webdunia
webdunia
webdunia

ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡ: ಜಮೀರ್ ಅಹ್ಮದ್ ಜೊತೆಗೂ ಮಾತುಕತೆ

Nazir Ahmed
ಬೆಂಗಳೂರು: ದಾವಣಗೆರೆ ಉಪ ಚುನಾವಣೆಯಲ್ಲಿ ಉಂಟಾಗಿದ್ದ ಅಸಮಾಧಾನ ಅಲೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸುತ್ತಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡವಾಗಿದೆ. ಸಚಿವ ಜಮೀರ್ ಅಹ್ಮದ್ ಜೊತೆಗೆ ಸಿಎಂ ಸಿದ್ದರಾಮಯ್ಯ ಈಗಷ್ಟೇ ಮಾತುಕತೆ ನಡೆಸಿದ್ದಾರೆ.

ದಾವಣಗೆರೆ ಉಪಚುನಾವಣೆಯಲ್ಲಿ ತಮ್ಮ ಸಮುದಾಯದವರಿಗೆ ಟಿಕೆಟ್ ಕೊಡಲಿಲ್ಲ ಎಂದು ಮುಸ್ಲಿಂ ನಾಯಕರು ಅಸಹಕಾರ ತೋರಿದ್ದರು. ಇದು ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದೆ. ಈ ಕಾರಣಕ್ಕೆ ಈಗಾಗಲೇ ಒಬ್ಬೊಬ್ಬರಾಗಿ ಅಲ್ಪಸಂಖ್ಯಾತ ಸಮುದಾಯದ ನಾಯಕರ ತಲೆದಂಡವಾಗುತ್ತಿದೆ.

ಈಗಾಗಲೇ ಎಂಎಲ್ ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ಪಡೆಯಲಾಗಿದೆ. ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ, ಎಂಎಲ್ ಸಿ ನಜೀರ್ ಅಹ್ಮದ್ ತಲೆದಂಡವಾಗಿದೆ. ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಕೆಲವೇ ನಿಮಿಷಗಳ ಮಾತುಕತೆಯಾಗಿದ್ದು ಈಗ ಜಮೀರ್ ತಲೆದಂಡವಾಗುತ್ತಾ ಎಂಬ ಅನುಮಾನ ಮೂಡಿದೆ. ಒಟ್ಟಿನಲ್ಲಿ ದಾವಣಗೆರೆ ಕಿಡಿ ರಾಜ್ಯ ಕಾಂಗ್ರೆಸ್ ನಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ