Publish Date: Mon, 08 Oct 2018 (10:14 IST)
Updated Date: Mon, 08 Oct 2018 (10:15 IST)
ಬೆಂಗಳೂರು: ಪಕ್ಷದ ನಾಯಕರು ಮತ್ತು ಸಿಎಂ ಎಚ್ ಡಿಕೆ ಧೋರಣೆಯಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲು ಎಂಎಲ್ ಸಿ ರಘು ಆಚಾರ್ ತೀರ್ಮಾನಿಸಿದ್ದಾರೆ.
ಚಿತ್ರದುರ್ಗದವರಾದ ರಘು ಆಚಾರ್ ತಮ್ಮ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಸಿಎಂ ಗಮನ ಹರಿಸುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಅವರನ್ನು ಭೇಟಿಯಾಗಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಈ ಬಗ್ಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲಿರುವ ರಘು ಆಚಾರ್ ತಮ್ಮ ತೀರ್ಮಾನ ತಿಳಿಸಲಿದ್ದಾರೆ. ಆದರೆ ತಾವು ಬೇರೆ ಯಾವುದೇ ಪಕ್ಷಕ್ಕೂ ಸೇರದೇ ಸ್ವತಂತ್ರವಾಗಿ ಸ್ಪರ್ಧೆ ನಡೆಸುವುದಾಗಿ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.