ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರು ನೋವನ್ನು ತೋಡಿಕೊಂಡಿದ್ದಾರೆ. ಸಮಾಜಘಾತುಕ ಕೆಲಸಕ್ಕೆ ಮುಂದಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡದ ನಟರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದು ತಮಿಳಿಗರು. ತಮಿಳಿಗರನ್ನು ನಾವು ಅಣ್ಣ ತಮ್ಮಂದಿರೆಂದು ತಿಳಿದಿದ್ದೇವು. ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಎಸಗುವ ಮೂಲಕ ಕನ್ನಡಿಗರನ್ನು ರೊಚ್ಚಿಗೆಳಿಸುತ್ತಿದ್ದಾರೆ ಎಂದರು.
ತಮಿಳುನಾಡಿಗೆ ಕನ್ನಡಿಗರು ಮೋಜು ಮಸ್ತಿ ಮಾಡಲು ತೆರಳಿಲ್ಲ. ಅವರು ಭಕ್ತರಾಗಿ ತೆರಳಿದ್ದಾರೆ. ಅವರ ಮೇಲಿನ ಹಲ್ಲೆಯ ದೃಷಾವಳಿಗಳನ್ನು ಸುಪ್ರೀಂ ಕೋರ್ಟ್‌ಗೆ ನೀಡಬೇಕಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಇದೆಲ್ಲಾ ಕಾಣುತ್ತಿಲ್ಲವೇ ಎಂದು ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧಾ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.