Publish Date: Fri, 15 Sep 2017 (20:17 IST)
Updated Date: Fri, 15 Sep 2017 (20:19 IST)
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಪರಿಷತ್ ಸದಸ್ಯರೊಂದಿಗೆ ನಡೆದ ಸಿಎಂ ಸಿದ್ದರಾಮಯ್ಯ ಸಭೆ ಅಪೂರ್ಣಗೊಂಡಿದೆ.
ಇಂದು ಸಂಜೆ ವಿಧಾನಪರಿಷತ್ ಸದಸ್ಯರೊಂದಿಗೆ ಚರ್ಚೆ ನಡೆಸಿದ ಸಿಎಂ, ಸೆಪ್ಟೆಂಬರ್ 19 ರಂದು ಮತ್ತೊಂದು ಸುತ್ತಿನ ಸಭೆ ಕರೆಯುತ್ತೇನೆ.ಆಹೋರಾತ್ರಿ ಧರಣಿಯನ್ನು ಕೈಬಿಡಿ ಎಂದು ಮನವಿ ಮಾಡಿಕೊಂಡರು ಎನ್ನಲಾಗಿದೆ.
ಆದರೆ, ಇದಕ್ಕೊಪ್ಪದ ವಿಧಾಪರಿಷತ್ ಸದಸ್ಯರು, ಧರಣಿ ಮುಂದುವರಿಸುವ ಬಿಗಿಪಟ್ಟು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಬಳಿ ವಿಧಾನಪರಿಷತ್ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.