Publish Date: Fri, 23 Nov 2018 (10:11 IST)
Updated Date: Fri, 23 Nov 2018 (10:12 IST)
ಬೆಂಗಳೂರು: ಕಾಲೇಜಿಗೆ ಹೋಗುವಾಗ ಇನ್ಮುಂದೆ ಮೊಬೈಲ್ ಜತೆಗೆ ಲ್ಯಾಪ್ ಟಾಪ್ ಕೂಡಾ ಕೊಂಡೊಯ್ಯುವಂತಿಲ್ಲ! ಹೀಗೆ ರಾಜ್ಯ ಸರ್ಕಾರವೇ ಆದೇಶ ಹೊರಡಿಸಿದೆ.
ಪದವಿಪೂರ್ವ ಕಾಲೇಜುಗಳಿಗೆ ಈ ನಿಯಮ ಅನ್ವಯಿಸಲಿದೆ. ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಇಂತಹ ತಂತ್ರಜ್ಞಾನಗಳ ದುರ್ಬಳಕೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ.
ಇದಕ್ಕೂ ಮೊದಲು ರಾಜ್ಯ ಸರ್ಕಾರ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಬೈಕ್, ಕಾರು ತರುವುದನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಿತ್ತು. ಇದರ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.