Publish Date: Tue, 27 Dec 2022 (15:39 IST)
Updated Date: Tue, 27 Dec 2022 (15:48 IST)
ವಿದೇಶದಿಂದ ಬಂದಿದ್ದ ನಾಲ್ವರಿಗೆ ಕೊವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿನ್ನೆ ವಿದೇಶದಿಂದ ಬಂದಿದ್ದ 119 ಪ್ರಯಾಣಿಕರಿಗೆ ಟೆಸ್ಟ್ ಮಾಡಲಾಗಿತ್ತು. 119 ಪ್ರಯಾಣಿಕರ ಪೈಕಿ ನಾಲ್ವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸದ್ಯ ನಾಲ್ವರು ಸೋಂಕಿತರಿಗೆ ವೈದ್ಯರು ಐಸೋಲೇಷನ್ ಮಾಡಿದ್ದು, ಈ ಮೂಲಕ ವಿದೇಶದಿಂದ ಮರಳಿದ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಮತ್ತೆ ಮಹಾಮಾರಿ ಕೊರೋನಾ ಅಲೆ ಬೀಸುತ್ತಿದೆ. ಕಳೆದು ಹೋದ ದಿನಗಳು ಮರುಕಳಿಸುವ ಭೀತಿ ಎದುರಾಗಿದೆ.. ಡಿಸೆಂಬರ್22 ರಂದು 16 ಸೋಂಕಿತರು ಪತ್ತೆಯಾಗಿದ್ದರು.. ಡಿಸೆಂಬರ್23 ರಂದು 10 ಸೋಂಕಿತರು ಪತ್ತೆಯಾಗಿದ್ರೆ, ಡಿಸೆಂಬರ್ 24 ರಂದು 19 ಸೋಂಕಿತರು ಪತ್ತೆಯಾಗಿದ್ದಾರೆ.. ಡಿಸೆಂಬರ್ 25 ರಂದು 22 ಸೋಂಕಿತರು ಪತ್ತೆ ಆಗುವ ಮೂಲಕ ಸೋಂಕಿತರ ಸಂಖ್ಯೆಯಲ್ಲಿ ಸಣ್ಣ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.. ಸದ್ಯ ರಾಜ್ಯದಲ್ಲಿ ಒಮೈಕ್ರಾನ್ ರೂಪಾಂತರಿ ತಳಿ BF.7 ಭೀತಿ ಹಿನ್ನೆಲೆ ರೂಪಾಂತರಿ ತಳಿ BF.7 ಎದುರಿಸಲು ಆರೋಗ್ಯ ಇಲಾಖೆ ಸಜ್ಜಾಗುತ್ತಿದೆ. ಬೆಂಗಳೂರು ನಗರದ ಆಸ್ಪತ್ರೆಗಳಲ್ಲಿ ಇಂದು ಮಾಕ್ ಡ್ರಿಲ್ ನಡೆಸುತ್ತಿದೆ.. ಬೆಂಗಳೂರಿನ ಬೌರಿಂಗ್ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ, ಜಯನಗರ ಸಾರ್ವಜನಿಕ ಆಸ್ಪತ್ರೆ, ಸಿ.ವಿ.ರಾಮನ್ನಗರ ಆಸ್ಪತ್ರೆ, ESI ಆಸ್ಪತ್ರೆ ಸೇರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಸಲಾಗುತ್ತಿದೆ.