Select Your Language

Notifications

webdunia
webdunia
webdunia
webdunia

ಡ್ರಗ್ಸ್ ಕೇಸಲ್ಲಿ ಸಿಕ್ಕಿಬಿದ್ದ ಮಾಡೆಲ್: ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದ ಸೋನಿಯಾ!

model
bengaluru , ಸೋಮವಾರ, 30 ಆಗಸ್ಟ್ 2021 (17:00 IST)
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ರೂಪದರ್ಶಿ ಸೋನಿಯಾ ಅಗರ್ ವಾಲ್ ಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು, ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದರು ಎಂದು ತಿ
ಳಿದು ಬಂದಿದೆ.
ಸೋಮವಾರ ಬೆಳ್ಳಂಬೆಳಗ್ಗೆ ಸೋನಿಯಾ ಮನೆಯ ಮೇಲೆ ದಾಳಿ ನಡೆಸಿದ ಪೂರ್ವ ವಲಯದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದರು. ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಾಗ ಸೋನಿಯಾ ಅಗರ್ ವಾಲ್ ಮನೆಯಲ್ಲಿ ಇರಲಿಲ್ಲ.
ಭಾನುವಾರ ರಾತ್ರಿ ಪಾರ್ಟಿಗೆ ಹೋಗಿದ್ದ ಆಕೆ ಮನೆಗೆ ಬಂದಿರಲಿಲ್ಲ. ದಾಳಿ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಆಕೆಗೆ ಕರೆ ಮಾಡಿದ್ದರು. ಈ ವೇಳೆ ಆಕೆ ಕರೆಯನ್ನು ಸ್ವೀಕರಿಸಿರಲಿಲ್ಲ. ಆ ಬಳಿಕ ಆಕೆಯ ತಂದೆಯಿಂದ ಫೋನ್ ಕರೆ ಮಾಡಿಸಿದ್ದರು. ಈ ವೇಳೆ ಆಕೆ ಮಧ್ಯಾಹ್ನ 12 ಗಂಟೆಗೆ ಬರುವುದಾಗಿ ಹೇಳಿದ್ದಳು.  
ಅಗರ್ವಾಲ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯ ತಂದೆಯಿಂದ ಕೀ ತೆಗೆಸಿ ಮನೆಯನ್ನು ಜಾಲಾಡಿದ್ದಾರೆ. ಈ ವೇಳೆ 40 ಗ್ರಾಂ ಗಾಂಜಾ ಪತ್ತೆಯಾಗಿತ್ತು. ನಂತರ ತನಿಖೆ ನಡೆಸಿದ ಪೊಲೀಸರಿಗೆ ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ  ಸೋನಿಯಾ ಇರುವುದು ಪತ್ತೆ ಹಚ್ಚಿ,  ಆಕೆಯನ್ನು ವಶಕ್ಕೆ ಪಡೆಯಲು ತೆರಳಿದರು. ಈ ವೇಳೆ ಪೊಲೀಸರು ಬರುತ್ತಿದ್ದಂತೆ ವಾಶ್ ರೂಮ್ ನಲ್ಲಿ ಅಡಗಿ ಕುಳಿತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಆಗ್ರ್ಯಾನಿಕ್ ಕಾಸ್ಮೆಟಿಕ್ ಕಂಪನಿ ನಡೆಸುತ್ತಿದ್ದ ಸೋನಿಯಾ ಜೊತೆ ಡಜನ್‍ಗಟ್ಟಲೇ ಸೆಲೆಬ್ರಿಟಿಗಳ ಲಿಂಕ್ ಇರುವುದು ಗೊತ್ತಾಗಿದೆ. ಎಲ್ಲಾ ಪಾರ್ಟಿಗಳಲ್ಲಿ ಸೋನಿಯಾ ಅಗರ್ವಾಲ್ ಮುಖಾಂತರ ಸೆಲೆಬ್ರಿಟಿಗಳು ಎಂಟ್ರಿ ಕೊಡುತ್ತಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೇಯಸಿ ಕೊಂದು ತಾನೇ ಆಸ್ಪತ್ರೆಗೆ ಸೇರಿಸಿ ಕತೆ ಕಟ್ಟಿದ!