Publish Date: Tue, 04 Jun 2024 (14:08 IST)
Updated Date: Tue, 04 Jun 2024 (14:10 IST)
ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಲೋಕಸಭೆ ಚುನಾವಣೆ ಫಲಿತಾಂಶ ಗಮನಿಸಿದರೆ ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಕಿಂಗ್ ಮೇಕರ್ ಗಳಾಗಿದ್ದಾರೆ. ಹೀಗಾಗಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ಈಗ ಈ ಇಬ್ಬರು ನಾಯಕರ ಜೊತೆ ಮಾತುಕತೆಗೆ ಮುಂದಾಗಿದೆ.
ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ಟಿಡಿಪಿ ನಾಯಕ ಚಂದ್ರ ಬಾಬು ನಾಯ್ಡು ಜೊತೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇಬ್ಬರೂ ಮಿತ್ರ ಪಕ್ಷದ ನಾಯಕರನ್ನು ಸೆಳೆಯಲು ಅತ್ತ ಇಂಡಿಯಾ ಒಕ್ಕೂಟದ ನಾಯಕರೂ ಬಲೆ ಬೀಸಿದ್ದಾರೆ. ಹೀಗಾಗಿ ಈ ಇಬ್ಬರೂ ಮಿತ್ರ ಪಕ್ಷದ ನಾಯಕರನ್ನು ಹಿಡಿದಿಟ್ಟುಕೊಳ್ಳಲು ಮೋದಿ, ಅಮಿತ್ ಶಾ ಈಗಲೇ ಪ್ರಯತ್ನ ನಡೆಸಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ ಕೂಡಾ ಭಾರೀ ಸಭೆ ನಡೆಸುತ್ತಿದೆ. ದೆಹಲಿಯಲ್ಲಿ ಪ್ರಿಯಾಂಕ ವಾದ್ರಾ ನಿವಾಸದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಮುಂದೆ ಇಡಬೇಕಾದ ಹೆಜ್ಜೆ ಕುರಿತು ಸಭೆ ನಡೆಸಲಾಗುತ್ತಿದೆ.