Select Your Language

Notifications

webdunia
webdunia
webdunia
webdunia

ಇಂದು ಮೋದಿ ಕರ್ನಾಟಕಕ್ಕೆ ಆಗಮನ: ಹಸಿರು ಮಾರ್ಗದ ಪ್ರಯಾಣಿಕರಿಗೆ ಬಿಗ್‌ ಶಾಕ್

ಪ್ರಧಾನಿ ನರೇಂದ್ರ ಮೋದಿ

Sampriya

ಬೆಂಗಳೂರು , ಭಾನುವಾರ, 10 ಆಗಸ್ಟ್ 2025 (10:18 IST)
Photo Credit X
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ್ಕೆ ಆಗಮನದ ಹಿನ್ನೆಲೆ ಇಂದು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಸಿರು ಮಾರ್ಗದ  ನಾಲ್ಕು ನಿಲ್ದಾಣಗಳು ತಾತ್ಕಾಲಿಕವಾಗಿ ಮುಚ್ಚಲಿದೆ.

ಲಾಲ್ ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ, ಆರ್ ವಿ ರಸ್ತೆ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಮುಚ್ಚಲಾಗುತ್ತದೆ ಎಂದು ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಇಂದು ಲೋಕಾರ್ಪಣೆ ಮಾಡಲಿದ್ದಾರೆ. 

ಬೆಳಗ್ಗೆ 10:30ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ಮೋದಿ 3 ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದು, ಇದರಲ್ಲಿ ಬೆಳಗಾವಿಯಿಂದ ಬೆಂಗಳೂರು ರೈಲು ಕೂಡ ಸೇರಿದೆ. ಬಳಿಕ 11:50 ರ ಸುಮಾರಿಗೆ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ

ಹಳದಿ ಮಾರ್ಗದ ವಿಶೇಷತೆ ಏನೆಂದರೆ ಇದನ್ನು ₹5,057 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದೀಗ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರವರೆಗಿನ ಹಳದಿ ಮಾರ್ಗದಲ್ಲಿ ಹಳದಿ ಮೆಟ್ರೋ ರೈಲು ಸಂಚರಿಸಲು ಸಿದ್ಧವಾಗಿದೆ. ಉದ್ಘಾಟನೆ ಮಾಡಿದ ಬಳಿಕ ರಾಗಿಗುಡ್ಡ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿಯವರೆಗೆ ಮೋದಿ ಮೆಟ್ರೋದಲ್ಲಿ ಸಂಚಾರ ಮಾಡಲಿದ್ದಾರೆ. ಹಳದಿ ಮಾರ್ಗ ಒಟ್ಟು 16 ನಿಲ್ದಾಣಗಳನ್ನು ಒಳಗೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ