Select Your Language

Notifications

webdunia
webdunia
webdunia
webdunia

ವಂದೇ ಭಾರತ್​​​​​​ ರೈಲಿಗೆ ಮೋದಿ ಚಾಲನೆ

webdunia
bangalore , ಶುಕ್ರವಾರ, 11 ನವೆಂಬರ್ 2022 (16:52 IST)
ಬೆಂಗಳೂರಿನ KSR ರೈಲು ನಿಲ್ದಾಣದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಪ್ರಧಾನಿಯನ್ನು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸ್ವಾಗತಿಸಿದರು. ಪ್ಲಾಟ್‌ಫಾರಂ ಸಂಖ್ಯೆ 7ರಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ. ಇದಕ್ಕೂ ಮೊದಲು ಕೆಲ ಸಮಯ ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು. ಬಳಿಕ ಇದೇ ರೈಲು ನಿಲ್ದಾಣದಲ್ಲಿ ಕಾಶಿ ವಿಶ್ವನಾಥನ ದರ್ಶನಕ್ಕೆ ಹೋಗುವವರಿಗೆ ಅನುಕೂಲವಾಗುವಂತಹ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೂ ಚಾಲನೆ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ರೈಲು ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಕಾರಿನಿಂದ ಕೆಳಗೆ ಇಳಿದು ಕಾರ್ಯಕರ್ತರಿಗೆ ಕೈ ಮುಗಿದು, ಕೈ ಬೀಸಿದರು. ಮೋದಿ ಅವರನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. 

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ