ಪ್ರಧಾನಿ ನರೇಂದ್ರ ಮೋದಿ ಇಂದು ಹಿಮಾಚಲ ಪ್ರದೇಶದ ಉನಾದಲ್ಲಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಅವರು ಇಂದು ಉತ್ತರ ರಾಜ್ಯವಾದ ಹಿಮಾಚಲ ಪ್ರದೇಶದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಮುಂತಾದವರು ಉಪಸ್ಥಿತರಿದ್ದರು. ಅಂಬ್ ಅಂಡೌರಾದಿಂದ ನವದೆಹಲಿಗೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸಂಚಾರಕ್ಕೆ ಉನಾದಲ್ಲಿ ಫ್ಲ್ಯಾಗ್‌ಆಫ್ ಮಾಡಲಾಯಿತು. ಇದು ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ ಮೋದಿಯವರ 9ನೇ ಭೇಟಿಯಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಹೇಳಿದ್ದಾರೆ.