ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸುಲ್ತಾನ್ ಮೊಹಮ್ಮದ್ ಬಿನ್ ತುಘಲಕ್‌ನಂತೆ ಆಡಳಿತ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಾದ್ಯಂತ ಏಕಾಏಕಿ ನೋಟ್ ಬ್ಯಾನ್ ಆದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರಕಾರ ಹೊಸ ಘೋಷಣೆಗಳನ್ನು ಮಾಡುವ ಮೂಲಕ ಜನರನ್ನು ಗೊಂದಲಕ್ಕೀಡಾಗುವಂತೆ ಮಾಡಿದೆ ಎಂದು ದೂರಿದರು.
ಮೊಹಮ್ಮದ್ ಬಿನ್ ತುಘಲಕ್ ಸರಕಾರದಂತೆ ಮೋದಿ ಸರಕಾರ ಆಡಳಿತ ನಡೆಸುತ್ತಿದೆ. ಪ್ರತಿದಿನ ಹೊಸ ಹೊಸ ಘೋಷಣೆಗಳನ್ನು ಮಾಡುವ ಮೂಲಕ ಜನರನ್ನು ಗೊಂದಲ ಸಿಕ್ಕಿಸುತ್ತಿದೆ. ಕೇಂದ್ರ ಸರಕಾರದ ನಿರ್ಣಯದಿಂದ ಜನರು ಶೋಷಣೆಗೊಳಗಾಗುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.
ಆಡಳಿತ ನಡೆಸಲು ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ. 500, 1000 ಮುಖಬೆಲೆಯ ನೋಟ್ ಬ್ಯಾನ್ ನಿಷೇಧದ ನಿರ್ಧಾರದಿಂದ ಕೇಂದ್ರ ಸರಕಾರವೇ ಗೊಂದಲಕ್ಕೂಳಗಾಗಿದೆ ಎಂದು ವ್ಯಂಗ್ಯವಾಡಿದರು.
ನೋಟು ನಿಷೇಧದ ನಿರ್ಧಾರ ದೇಶದ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ನಿರ್ವಹಣೆಯಾಗಿದೆ ಎಂಬ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಮಾತು ಸತ್ಯವಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ