Publish Date: Tue, 19 Sep 2017 (12:46 IST)
Updated Date: Tue, 19 Sep 2017 (12:48 IST)
ಕೇಂದ್ರ ಸರಕಾರದಿಂದ ರಾಜ್ಯದ ಸಚಿವರು ಮತ್ತು ಶಾಸಕರ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯದ ಸಚಿವರು ಮತ್ತು ಶಾಸಕರು ಸೇರಿದಂತೆ 35 ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರಕಾರ ಫೋನ್ ಕದ್ದಾಲಿಸುತ್ತಿದೆ ಎನ್ನುವ ಬಿಜೆಪಿ ಮುಖಂಡ ಆರ್.ಅಶೋಕ್ ಆರೋಪ ಶುದ್ಧ ಸುಳ್ಳು. ಫೋನ್ ಕದ್ದಾಲಿಸುತ್ತಿರುವುದು ರಾಜ್ಯ ಸರಕಾರವಲ್ಲ ಕೇಂದ್ರ ಸರಕಾರವೇ ರಾಜ್ಯದ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಹೇಳಿದ್ದಾರೆ.
ಹಲವು ದಿನಗಳಿಂದ ಕೇಂದ್ರ ಸರಕಾರ ರಾಜ್ಯದ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.