Webdunia - Bharat's app for daily news and videos

Install App

ಬೆಂಗಳೂರು- ಬೆಳಗಾವಿ ವಂದೇ ಭಾರತ್‌ಗೆ ಕೆಲವೇ ಕ್ಷಣಗಳಲ್ಲಿ ಮೋದಿ ಗ್ರೀನ್‌ಸಿಗ್ನಲ್‌: ವೇಳಾಪಟ್ಟಿ ಹೀಗಿದೆ

Sampriya
ಭಾನುವಾರ, 10 ಆಗಸ್ಟ್ 2025 (10:50 IST)
Photo Credit X
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೆಲವೇ ಕ್ಷಣದಲ್ಲಿ ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲಿಗೆ ಗ್ರೀನ್‌ ಸಿಗ್ನಲ್‌ ನೀಡಲಿದ್ದಾರೆ. ಇದು ರಾಜ್ಯದಲ್ಲಿ ಸಂಚರಿಸುವ 11ನೇ ವಂದೇ ಭಾರತ್ ರೈಲು ಆಗಿದೆ.

ಇಂದು ಬೆಳಗ್ಗೆ 11:15ಕ್ಕೆ ನಗರದ ಕೆಎಸ್‌ಆರ್ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರು ಟು ಬೆಳಗಾವಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಲಿದ್ದಾರೆ.  ಈ ರೈಲು 8 ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದು, ಬುಧವಾರ ಹೊರತುಪಡಿಸಿ ವಾರದ 6 ದಿನ ಈ ರೈಲು ಸಂಚರಿಸಲಿದೆ. 

ಈ ಮೂಲಕ ಉತ್ತರ ಕರ್ನಾಟಕದ ಜನರಿಗೆ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಕಿತ್ತೂರು ಕರ್ನಾಟಕ, ದಕ್ಷಿಣ ಕರ್ನಾಟಕ ಮೂಲಕ ರಾಜ್ಯ ರಾಜಧಾನಿ ಸಂಪರ್ಕಿಸಲಿದೆ. ಈ ರಾಜ್ಯದ ವಂದೇ ಭಾರತ್ ರೈಲಿನ ಜೊತೆ ಎರಡು ಉತ್ತರ ಭಾರತ ರೈಲಿಗೂ ವರ್ಚುವಲ್ ರೈಲುಗಳ ಮೂಲಕ ಚಾಲನೆ ದೊರೆಯಲಿದೆ. 

ವೇಳಾಪಟ್ಟಿ ಹೀಗಿದೆ.  ಬೆಳಗಾವಿಯಿಂದ ಬೆಳಗ್ಗೆ 5:20ಕ್ಕೆ ಹೊರಟು ಮಧ್ಯಾಹ್ನ 1:50ಕ್ಕೆ ಬೆಂಗಳೂರು ತಲುಪುವ ರೈಲು, ಮಧ್ಯಾಹ್ನ 2:20ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ನಡುವೆ ಸಂಪರ್ಕಿಸಲಿದೆ. ಪ್ರಯಾಣದ ಅವಧಿ 8:50 ಗಂಟೆ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ಮೋದಿ ಕರ್ನಾಟಕಕ್ಕೆ ಆಗಮನ: ಹಸಿರು ಮಾರ್ಗದ ಪ್ರಯಾಣಿಕರಿಗೆ ಬಿಗ್‌ ಶಾಕ್

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಮುಂದಿನ ಸುದ್ದಿ
Show comments