Select Your Language

Notifications

webdunia
webdunia
webdunia
webdunia

ಮೊರ್ಬಿ ದುರಂತಕ್ಕೆ ಮೋದಿ, ಮುರ್ಮು ಸಂತಾಪ

ಮೊರ್ಬಿ ದುರಂತಕ್ಕೆ ಮೋದಿ, ಮುರ್ಮು ಸಂತಾಪ
ಗುಜರಾತ್‌ , ಸೋಮವಾರ, 31 ಅಕ್ಟೋಬರ್ 2022 (16:37 IST)
ನಿನ್ನೆ ಗುಜರಾತ್‌ನ ಮೊರ್ಬಿ ನಗರದಲ್ಲಿ ಸೇತುವೆ ಕುಸಿದು ಸಾವುನೋವು ಸಂಭವಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು  ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯ ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದ ಎಲ್ಲಾ ಪಕ್ಷದ ಕಾರ್ಯಕರ್ತರಿಗೆ ರಕ್ಷಣಾ ಕಾರ್ಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಮನವಿ ಮಾಡಿದರು. ಘಟನೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಆದಾಗ್ಯೂ ಕೆಲವು ಪಕ್ಷದ ನಾಯಕರು ಘಟನೆಯನ್ನು ಮುಂದಿಟ್ಟುಕೊಂಡು BJPಯನ್ನು ಟೀಕಿಸಿದರು. ಈ ಘಟನೆಯನ್ನು ಮಾನವ ನಿರ್ಮಿತ ದುರಂತ ಎಂದು ಕಾಂಗ್ರೆಸ್​ನ ರಾಷ್ಟ್ರೀಯ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಬಣ್ಣಿಸಿದರು. ಇನ್ನು, ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಮೋದಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಎಲ್ಲಾ ಅಗತ್ಯ ನೆರವು ನೀಡಲಾಗುತ್ತಿದೆ ಎಂದು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ತೆಲಂಗಾಣದಲ್ಲಿ ರಾಹುಲ್​​ ಪಾದಯಾತ್ರೆ