Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಮೋದಿ ಮಧ್ಯಪ್ರವೇಶಕ್ಕೆ ಒತ್ತಾಯಿಸಿ ಎನ್‌ಎಸ್‌ಯುಐ ಸಹಿ ಸಂಗ್ರಹ ಅಭಿಯಾನ

ಕಾವೇರಿ ವಿವಾದ: ಮೋದಿ ಮಧ್ಯಪ್ರವೇಶಕ್ಕೆ ಒತ್ತಾಯಿಸಿ ಎನ್‌ಎಸ್‌ಯುಐ ಸಹಿ ಸಂಗ್ರಹ ಅಭಿಯಾನ
ಬೆಂಗಳೂರು , ಶನಿವಾರ, 24 ಸೆಪ್ಟಂಬರ್ 2016 (15:42 IST)
ಮಹದಾಯಿ ಹಾಗೂ ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿ ಯೂತ್ ಕಾಂಗ್ರೆಸ್ ಮತ್ತು ಎನ್‌.ಎಸ್.ಯು.ಐ ನಿಂದ ಸಹಿ ಸಂಗ್ರಹ ಅಭಿಯಾನ ನಡೆಯಿತು.
 
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಸಹಿ ಸಂಗ್ರಹ ಅಭಿಯಾನಕ್ಕೆ ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರ ಚಳುವಳಿಯ ಮೂಲಕ ರಾಜ್ಯದ ಸಂಕಷ್ಟವನ್ನು ಪ್ರಧಾನಿ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ಈಗಾಲಾದ್ರೂ ಮೋದಿ ಅವರು ಜಲ ವಿವಾದ ಸಮಸ್ಯೆ ಇತ್ಯರ್ಥಗೊಳಿಸಲು ಮುಂದಾಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನರೇಂದ್ರ ಮೋದಿ ಅವರಿಗೆ ಹಲವು ಬಾರಿ ಪತ್ರ ಬರೆದಿದ್ದರೂ ಸಹ ಕೇಂದ್ರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದರು. 
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸೆ.26 ರಂದು ನಟ ದರ್ಶನ್‌ಗೆ ನೋಟಿಸ್ ಜಾರಿ: ಜಿಲ್ಲಾಧಿಕಾರಿ