ಕೇಂದ್ರ ಸರಕಾರ ಏಕಾಏಕಿ 500, 1000 ರೂಪಾಯಿ ಬ್ಯಾನ್ ಮಾಡಿರುವುದರಿಂದ ಬಡವರರು ಬೀದಿಗೆ ಬರುವಂತಾಗಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಭಾಷಣದ ವೇಳೆ ಯಾರಿಗಾಗಿ ಕಣ್ಣೀರು ಸುರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಪ್ರಶ್ನಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಪ್ಪು ಹಣ ತಡೆಗಟ್ಟಲು ಶ್ರೀಮಂತರ ಮೇಲೆ ತೆರಿಗೆ ವಿಧಿಸಬಹುದಿತ್ತು. ಆದರೆ, ಕೇಂದ್ರ ಸರಕಾರ ಏಕಾಏಕಿ 500, 1000 ರೂಪಾಯಿ ಬ್ಯಾನ್ ಮಾಡಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.
500, 1000 ರೂಪಾಯಿ ನೋಟ್ ಬ್ಯಾನ್ ಮಾಡಿರುವುದರಿಂದ ಬಡವರು ಪರದಾಡುವಂತಾಗಿದೆ. ಇಂತಹ ಸಮಯದಲ್ಲಿ ಮೋದಿ ಯಾರಿಗಾಗಿ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ವಾಗ್ದಾಳಿ ನಡೆಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ