Daily Horoscope
✕

ಬಾಪೂಜಿಗೆ ಮೋದಿ ನಮನ

Webdunia
ಭಾನುವಾರ, 2 ಅಕ್ಟೋಬರ್ 2022 (20:55 IST)
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗಾಂಧಿ ಜಯಂತಿ ಪ್ರಯುಕ್ತ ರಾಜಘಾಟ್​ನಲ್ಲಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹಾತ್ಮಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಅಕ್ಟೋಬರ್ 2ರಂದು ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅಹಿಂಸೆಯನ್ನು ಪ್ರತಿಪಾದಿಸಿದ್ದ ಗಾಂಧಿಯವರ ಜನ್ಮದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವಾಗಿ ಆಚರಿಸಲಾಗುತ್ತದೆ. 2007ರಲ್ಲಿ ವಿಶ್ವಸಂಸ್ಥೆಯ ಮಹಾಧಿವೇಶನವು ಅಹಿಂಸಾ ದಿನದ ನಿರ್ಣಯವನ್ನು ಅಂಗೀಕರಿಸಿತ್ತು. ಗಾಂಧಿ ಜಯಂತಿ ಪ್ರಯುಕ್ತ ಟ್ವೀಟ್ ಮಾಡಿರುವ ಮೋದಿ, ಗಾಂಧಿ ಜಯಂತಿಯಂದು ಮಹಾತ್ಮಾ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಈ ಬಾರಿಯ ಗಾಂಧಿ ಜಯಂತಿ ಇನ್ನೂ ವಿಶೇಷವಾದುದು. ಏಕೆಂದರೆ ಭಾರತವು ಈ ವರ್ಷ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ನಾವು ಬಾಪು ಅವರ ಆದರ್ಶಗಳಿಗೆ ಅನುಗುಣವಾಗಿ ಬದುಕಬೇಕಿದೆ ಎಂದು ಹೇಳಿದರು. ಮಹಾತ್ಮಾ ಗಾಂಧಿ ಅವರಿಗೆ ಗೌರವ ಸಲ್ಲಿಸಲು ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸುವಂತೆ ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments