Publish Date: Tue, 31 Jan 2023 (08:12 IST)
Updated Date: Tue, 31 Jan 2023 (11:13 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ ತಿಂಗಳಿನಲ್ಲಿ ಮೂರು ಬಾರಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ಈ ಮೊದಲು ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಪ್ರಚಾರ ಭಾಷಣಕ್ಕೆ ಮೋದಿ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದರು.
ಈ ಬಾರಿ ಕರ್ನಾಟಕವನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ತನ್ನ ತಂತ್ರವನ್ನು ಬದಲಾಯಿಸಿದ್ದು ಚುನಾವಣಾ ದಿನಾಂಕ ಪ್ರಕಟವಾಗುವ ಮೊದಲೇ ಮೋದಿ ಅವರ ರಾಜ್ಯ ಪ್ರವಾಸವನ್ನು ಫಿಕ್ಸ್ ಮಾಡುತ್ತಿದೆ.
ಫೆ.6ರಂದು ಮೋದಿ ಅವರು ಬೆಂಗಳೂರು ಮತ್ತು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.