Publish Date: Tue, 20 Feb 2018 (13:19 IST)
Updated Date: Tue, 20 Feb 2018 (13:21 IST)
ರಾಜ್ಯ ಸರ್ಕಾರ ಶೇ 10ಕ್ಕಿಂತ ಅಧಿಕ ಕಮಿಷನ್‌ನ ಸರ್ಕಾರ ಎಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಧಾನಿ ಹುದ್ದೆಯಲ್ಲಿದ್ದುಕೊಂಡು ಈ ರೀತಿ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಆಧಾರ ರಹಿತ ಆರೋಪ ಮಾಡುವುದರಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ತಿಳಿಸಿದ್ದಾರೆ.
ಅವರು ಬಿಜೆಪಿಯ ಪ್ರಧಾನಿಯಲ್ಲ. ದೇಶದ ಪ್ರಧಾನಿ ಎಂಬುದು ಮರೆಯಬಾರದು, ಪ್ರಧಾನಮಂತ್ರಿಯಾಗಿ ನೋಟ್ ಬ್ಯಾನ್ ಮಾಡಿದ್ದು ಬಿಟ್ಟರೇ ಮೋದಿ ಅವರು ಬೇರೇನೂ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.