Publish Date: Sat, 23 Feb 2019 (14:57 IST)
Updated Date: Sat, 23 Feb 2019 (15:01 IST)
ಫೆ. 24ರಂದು ಈ ಅವಧಿಯ ಪ್ರಧಾನಿ ನರೇಂದ್ರ ಮೋದಿಯ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮ ಪ್ರಸಾರವಾಗಲಿದೆ.
ಈ ಹಿನ್ನಲೆಯಲ್ಲಿ ಬಿಜೆಪಿ ಸಂಸದ ಪಿ.ಸಿ.ಮೋಹನ್ ಹೇಳಿಕೆ ನೀಡಿದ್ದು, ನಾಳೆ ಬೆಂಗಳೂರು ಮಹಾನಗರ ಘಟಕದಿಂದ ಮೋದಿ ಮನ್ ಕಿ ಬಾತ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾವಿರಾರು ಸಾರ್ವಜನಿಕರು ಹಾಗೂ ಕಾರ್ಯಕರ್ತರು ಬರಲಿದ್ದಾರೆ ಎಂದರು.
ಈ ಅವಧಿಯ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮ ಇದಾಗಿದ್ದು, ಮತ್ತೊಮ್ಮೆ ಪ್ರಧಾನಿಯಾಗಲಿರುವ ಮೋದಿ ತಮ್ಮ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಏನು ಹೇಳ್ತಾರೆ ಅನ್ನೋದು ಕುತೂಹಲ ಮೂಡಿಸಿದೆ. ಬೆಂಗಳೂರಿನ ಮೂರು ಕ್ಷೇತ್ರಗಳನ್ನು ಕೂಡಿಸಿ ಒಂದು ಬೃಹತ್ ಕಾರ್ಯಕ್ರಮದ ವ್ಯವಸ್ಥೆ ಮಾಡಬೇಕಾಗಿತ್ತು.
ಆದ್ರೆ ಸ್ಥಳಾವಕಾಶ ಸಿಗದೇ ಹಿನ್ನಲೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಉತ್ತರ ಹಾಗೂ ಕೇಂದ್ರ ಲೋಕಸಭೆ ಕ್ಷೇತ್ರಗಳ ಜನರು ಈ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭ ಆಗಲಿದೆ ಎಂದರು.