Publish Date: Sat, 06 May 2023 (11:14 IST)
Updated Date: Sat, 06 May 2023 (11:16 IST)
ಬೆಂಗಳೂರು : ಚುನಾವಣಾ ಪ್ರಚಾರದ ಅಂತಿಮ ಘಟ್ಟದಲ್ಲಿ ಮತಶಿಕಾರಿ ನಡೆಸಲು ವಾರದ ಕೊನೆಯಲ್ಲಿ ಮೂರನೇ ಬಾರಿ ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಂಗಳೂರಿನ ಸೋಮೇಶ್ವರ ಸಭಾಭವನದಿಂದ ರಸ್ತೆಯಿಂದ ಅದ್ಧೂರಿಯಾಗಿ ರೋಡ್ ಶೋ ಪ್ರಾರಂಭಗೊಂಡಿದೆ.
ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 26.5 ಕಿ.ಮೀ ನಡೆಸುತ್ತಿದ್ದಾರೆ. ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಮಲ್ಲೇಶ್ವರಂ 18ನೇ ಕ್ರಾಸ್ ವರೆಗೆ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯುತ್ತಿದೆ. ತೆರೆದ ವಾಹನದಲ್ಲಿ ಮೋದಿ ಅಬ್ಬರದ ರೋಡ್ ಶೋ ನಡೆಯುತ್ತಿದ್ದು, ಸಹಸ್ರಾರು ಜನರತ್ತ ಮೋದಿ ಕೈಬೀಸುತ್ತಿದ್ದಾರೆ. ರೇಷ್ಮೆಯ ಕೇಸರಿ ಮೈಸೂರು ಪೇಟಾದಲ್ಲಿ ಕಂಗೊಳಿಸುತ್ತಿದ್ದಾರೆ. ಪಿಸಿ ಮೋಹನ್, ತೇಜಸ್ವಿ ಸೂರ್ಯ ಸಾಥ್ ನೀಡುತ್ತಿದ್ದಾರೆ.
ಮೋದಿ ರೋಡ್ ಶೋಗೆ ಕಲಾತಂಡಗಳು ಮೆರುಗು ತಂದುಕೊಟ್ಟಿದೆ. ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮುಗಿಲು ಮುಟ್ಟಿದೆ. ಹೂಮಳೆ ಸುರಿಸಿ ಸಂಭ್ರಮಿಸಿದ್ದಾರೆ. ಮೋದಿ ಮೋದಿ ಜೈಕಾರ ಘೋಷಣೆ ಜೋರಾಗಿದೆ.