Select Your Language

Notifications

webdunia
webdunia
webdunia
webdunia

ಮೇ 3 ರಂದು ಅಂಕೋಲಾಕ್ಕೆ ಮೋದಿ ಭೇಟಿ

ಮೇ 3 ರಂದು ಅಂಕೋಲಾಕ್ಕೆ ಮೋದಿ ಭೇಟಿ
bangalore , ಮಂಗಳವಾರ, 2 ಮೇ 2023 (18:00 IST)
ಎರಡು ದಿನ ರಾಜ್ಯ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಕ್ಕೆ ಬರಲಿದ್ದಾರೆ. ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದಲ್ಲಿ ಪ್ರಧಾನಿ ಮೋದಿ ಅಬ್ಬರದ ಪ್ರಚಾರಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.. ಸ್ವಾತಂತ್ರ್ಯ ಹೋರಾಟಗಾರರ ನಾಡು ಕರ್ನಾಟಕದ ಬಾರ್ಡೋಲಿ ಅಂಕೋಲಾವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಪರ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ.. ಶಾಸಕಿ ರೂಪಾಲಿ ನಾಯ್ಕ್ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ತಮ್ಮ ಪರ ಪ್ರಚಾರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ರೂಪಾಲಿ ನಾಯ್ಕ್ ಸಂತಸ ವ್ಯಕ್ತಪಡಿಸಿದ್ದಾರೆ.. ಗ್ರಾಮೀಣ ಭಾಗದ ಜನರಿಗೆ ಖುದ್ದಾಗಿ ಮೋದಿ ನೋಡುವ ಅವಕಾಶ ಸಿಗುವ ಹಿನ್ನೆಲೆಯಲ್ಲಿ ಎಲ್ಲರೂ ಕಾತರದಿಂದ ಕಾಯ್ತಿದ್ದಾರೆ. ಅಂದಾಜು 45 ಎಕರೆ ಜಾಗದಲ್ಲಿ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂದಾಜು ಮೂರು ಲಕ್ಷ ಜನ ಸೇರುವ ನಿರೀಕ್ಷೆ‌ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತದಾರರಿಗೆ ಸೀರೆ ಹಂಚಿಕೆ ವಿಡಿಯೋ ವೈರಲ್​,