ಪ್ರಧಾನಿ ನರೇಂದ್ರ ಮೋದಿ ಪತ್ನಿ ಜಶೋದಾ ಬೆನ್ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದಾರೆ.
ಜಶೋದಾ ಬೆನ್ ಚಿತ್ರದುರ್ಗ ನಗರದ ನೀಲಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ನೀಲಕಂಠೇಶ್ವರ ಸ್ವಾಮಿ ದರ್ಶನ ಪಡೆದುಕೊಂಡರು.
ಸಂಬಂಧಿಕರ ಜೊತೆ ಚಿತ್ರದುರ್ಗ ನಗರದ ನೀಲಕಂಠೇಶ್ವರ ಸ್ವಾಮಿ ದರ್ಶನ ಪಡೆದ ಜಶೊದಾ ಬೆನ್
ಅಲ್ಲಿಂದ ಶಿವಮೊಗ್ಗದ ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಲಿದ್ದಾರೆ.
ಸೂಕ್ತ ಪೊಲೀಸ್ ಬಂದೋಬಸ್ತ್ ನಡುವೆ ದೇಸವ್ಥಾನಕ್ಕೆ ಭೇಟಿ ನೀಡಿದ ಜಶೋದಾ ಬೆನ್, ರಾಮಚಂದ್ರಪುರ ಮಠದಲ್ಲಿ ನಡೆಯಲಿರುವ ಹೋಮದಲ್ಲಿ ಭಾಗಿಯಾಗಲಿದ್ದಾರೆ.