ಡೈರಿ ಬಿಡುಗಡೆ ಹಿಂದೆ ಮೋದಿ, ಶಾ ಪಿತೂರಿ

Webdunia
ಶನಿವಾರ, 25 ಫೆಬ್ರವರಿ 2017 (07:26 IST)
ಕಾಂಗ್ರೆಸ್ ಹೈ ಕಮಾಂಡ್‌ಗೆ ಕಪ್ಪಕಾಣಿಕೆ ಸಲ್ಲಿಕೆಯಾದ ಬಗ್ಗೆ ವಿವರವುಳ್ಳ ಡೈರಿ ಬಿಡುಗಡೆ ಹಿಂದೆ ಕೇವಲ ಮಾಜಿ ಸಿಎಂ ಯಡಿಯೂರಪ್ಪ ಮಾತ್ರವಿಲ್ಲ. ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಿತೂರಿಯೂ ಇದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಕಿಡಿಕಾರಿದ್ದಾರೆ.
 
ಕಂದಾಯ ಇಲಾಖೆ  ಅಥವಾ ಇಡಿ ಅಧಿಕಾರಿಗಳು ಡೈರಿಯನ್ನು ವಶಪಡಿಸಿಕೊಂಡಿದ್ದರೆ ಅದು ಕಮಲ ನಾಯಕರಿಗೆ ಹೇಗೆ ಸಿಗಲು ಸಾಧ್ಯ. ಅದರಲ್ಲಿನ ವಿವರಗಳು ಬಿಜೆಪಿ ನಾಯಕರಿಗೆ ಗೊತ್ತಾಗುವುದಾದರೂ ಹೇಗೆ. ಅದರಲ್ಲಿನ ಕೈ ಬರಹ ನನ್ನದಲ್ಲ ಎಂದು ಶಾಸಕ ಗೋವಿಂದರಾಜು ಸ್ಪಷ್ಟ ಪಡಿಸಿದ್ದಾರೆ. ಮತ್ತೀಗ ಆ ಕೈ ಬರಹ ಯಾರದ್ದು ಎಂಬುದೇ ಪ್ರಶ್ನೆ ಎಂದರು.
 
ರಹಸ್ಯ ಡೈರಿ ಸೋರಿಕೆಯಾದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರಿಂದ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
 
ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ನನ್ನನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸುವ ಮಾತನಾಡುತ್ತಾರೆ. ತಾಕತ್ತಿದ್ದರೆ ಹಾಗೆ ಮಾಡಿ ನೋಡಲಿ ಎಂದು, ಇದೇ ಸಂದರ್ಭದಲ್ಲಿ ಅವರು ತಮ್ಮದೇ ಪಕ್ಷದ ನಾಯಕರಿಗೆ ಸವಾಲು ಹಾಕಿದರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments