Select Your Language

Notifications

webdunia
webdunia
webdunia
webdunia

ಮತದಾರರಿಗೆ ಮೋದಿ ಕಿವಿಮಾತು

Modi speaks to the voters
dehali , ಶನಿವಾರ, 12 ನವೆಂಬರ್ 2022 (17:47 IST)
ಹಿಮಾಚಲ ಪ್ರದೇಶದಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈ ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಇಂದು ಮತದಾರರಿಗೆ ಮನವಿ ಮಾಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಇಂದು ಮೊದಲ ಬಾರಿಗೆ ಮತದಾನ ಮಾಡಲಿರುವ ಯುವ ಮತದಾರರಿಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಇಂದು ಹಿಮಾಚಲ ಪ್ರದೇಶದ ಎಲ್ಲಾ ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ದೇವಭೂಮಿಯ ಎಲ್ಲಾ ಮತದಾರರು ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪೂರ್ಣ ಉತ್ಸಾಹದಿಂದ ಭಾಗವಹಿಸಿ ಮತದಾನದ ಹೊಸ ದಾಖಲೆಯನ್ನು ಸೃಷ್ಟಿಸಲು ನಾನು ವಿನಂತಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇಂದು ಪ್ರಥಮ ಬಾರಿಗೆ ಮತದಾನ ಮಾಡಲಿರುವ ರಾಜ್ಯದ ಎಲ್ಲಾ ಯುವ ಜನತೆಗೆ ನನ್ನ ವಿಶೇಷ ಶುಭಾಶಯಗಳು ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

66ನೇ ದಿನಕ್ಕೆ ಕಾಲಿಟ್ಟ ಭಾರತ್​​​ ಜೋಡೋ