Webdunia - Bharat's app for daily news and videos

Install App

ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಮೋದಿ

Webdunia
ಶನಿವಾರ, 26 ಆಗಸ್ಟ್ 2023 (07:48 IST)
ಬೆಂಗಳೂರು : ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್‌ ಅಂಡ್‌ ಕಮಾಂಡ್‌ ನೆಟ್‌ವರ್ಕ್‌ ಕೇಂದ್ರಕ್ಕೆ ಆಗಮಿಸಿದ್ದಾರೆ.

ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ಅಧ್ಯಕ್ಷ ಸೋಮನಾಥ್‌ ಸೇರಿದಂತೆ ಚಂದ್ರಯಾನ-3 ಮಿಷನ್‌ ತಂಡದೊಂದಿಗೆ ಸುಮಾರು 1 ಗಂಟೆಗಳ ಕಾಲ ಚರ್ಚಿಸಿದರು. ನಂತರ ಚಂದ್ರಯಾನ-3 ಮಿಷನ್‌ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡರು.

ಇದೇ ವೇಳೆ ಪ್ರಧಾನಿ ಮೋದಿ ಅವರಿಗೆ, ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲ್ಮೈನಲ್ಲಿ ಕಾಲಿಟ್ಟ ದೃಶ್ಯವಿರುವ ಫೋಟೋ ಫ್ರೇಮ್‌ ಅನ್ನು ಇಸ್ರೋ ವಿಜ್ಞಾನಿಗಳು ಉಡುಗೊರೆಯಾಗಿ ನೀಡಿದರು.
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮೋದಿ ಅವರು ವಿಶೇಷ ವಿಮಾನದಲ್ಲಿ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಶೂ ಹಾಕಿಕೊಂಡು ಹೋಮದಲ್ಲಿ ಪಾಲ್ಗೊಂಡ ಲಾಲೂ ಯಾದವ್

ಧರ್ಮಸ್ಥಳ ಅನಾಮಿಕ ದೂರುದಾರನ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಎಸ್ಐಟಿ

ಶಕ್ತಿ ಯೋಜನೆಗೆ ರೆಕಾರ್ಡ್ ಹಾಗಿರ್ಲಿ, ಸಾರಿಗೆ ನೌಕರರಿಗೆ ಸಂಬಳ ಹಾಕಿ: ಸಿಎಂಗೆ ನೆಟ್ಟಿಗರ ಕ್ಲಾಸ್

ಶಕ್ತಿ ಯೋಜನೆ ಗೋಲ್ಡನ್ ಬುಕ್ ರೆಕಾರ್ಡ್ ಪಟ್ಟಿಗೆ: ಸಿದ್ದರಾಮಯ್ಯ ಖುಷಿಗೆ ಹೇಳಿದ್ದೇನು ನೋಡಿ

ಮೋದಿ, ಪುಟಿನ್ ಭಾರೀ ಫ್ರೆಂಡ್ಸ್ ಎನ್ನುವುದಕ್ಕೆ ಇದೇ ಸಾಕ್ಷಿ

ಮುಂದಿನ ಸುದ್ದಿ
Show comments