Publish Date: Thu, 11 Nov 2021 (19:24 IST)
Updated Date: Thu, 11 Nov 2021 (19:35 IST)
ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ ನಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನಿಮಿತ್ತ ಪ್ರಧಾನಿಗಳು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.ಬೆಂಗಳೂರು ಉಪನಗರ ರೈಲು ಯೋಜನೆಯ ಅಡಿಗಲ್ಲು ಸಮಾರಂಭ, ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ಹಾಗೂ ಉನ್ನತೀಕರಿಸಿದ ಐಟಿಐಗಳ ಉದ್ಘಾಟನೆ ಸೇರಿದಂತೆ ಬೆಂಗಳೂರು ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಪ್ರಧಾನಿಯವರನ್ನು ಆಹ್ವಾನಿಸಲಾಗಿದೆ.
ಅವರು ಡಿಸೆಂಬರ್ ನಲ್ಲಿ ಎರಡು ದಿನ ಈ ಕಾರ್ಯಕ್ರಮಗಳನ್ನು ನಿಗದಿಪಡಿಸುವಂತೆ ಸೂಚಿಸಿದ್ದಾರೆ. ಅವರ ರಾಜ್ಯಕ್ಕೆ ಎರಡು ಬಾರಿ ಆಗಮಿಸಲಿದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.