Publish Date: Thu, 23 Jul 2026 (17:33 IST)
Updated Date: Thu, 23 Jul 2026 (17:38 IST)
ಬೆಂಗಳೂರು: NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿಷಯದಲ್ಲಿ ಪ್ರಧನಿ ನರೇಂದ್ರ ಮೋದಿ ಬಹಳ ತಡವಾಗಿ ಪ್ರತಿಕ್ರಿಯಿಸಿದ್ದಕ್ಕೆ ಕರ್ನಾಟಕ ಡಿಸಿಎಂ ಜಿ. ಪರಮೇಶ್ವರ್ ಟೀಕಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕೆಂದು ಆಗ್ರಹಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸಲು ತ್ವರಿತಗತಿ ನ್ಯಾಯಾಲಯಗಳನ್ನು ಸ್ಥಾಪಿಸುವ ಕುರಿತು ಪ್ರಧಾನಿ ಮೋದಿ ಮಾಡಿದ ಟ್ವೀಟ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, "ತನಿಖೆ ನಡೆಸಲಾಗುವುದು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಬಹಳ ತಡವಾಗಿ ಪ್ರತಿಕ್ರಿಯಿಸಿದ್ದಾರೆ.
ತಾವು ವಿದ್ಯಾರ್ಥಿಗಳ ಪರವಾಗಿ ನಿಲ್ಲುವುದಾಗಿ ಅವರು ಹೇಳಿದ್ದಾರೆ. ಹಾಗಿದ್ದಲ್ಲಿ, ಧರ್ಮೇಂದ್ರ ಪ್ರಧಾನ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು. ಜವಾಬ್ದಾರರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ