Publish Date: Fri, 09 Mar 2018 (13:45 IST)
Updated Date: Fri, 09 Mar 2018 (13:46 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ತಿರಸ್ಕೃತಗೊಂಡಿದ್ದರಿಂದ ನಲಪಾಡ್ ಪರ ವಕೀಲರು ಹೈ ಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇದರ ಭಾಗವಾಗಿ ಮೊನ್ನೆಯಷ್ಟೇ ಮೊದಲ ಬಾರಿಗೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ಹೀ
ಹೀಗಾಗಿ ಇಂದು ಅಪರಾಹ್ನ ವಿಚಾರಣೆ ನಡೆಯಲಿದ್ದು ನಲಪಾಡ್ ಗೆ ಇಂದು ಜಾಮೀನು ಸಿಗುತ್ತಾ ಅಥವಾ ಮತ್ತೆ ನ್ಯಾಯಾಂಗ ಬಂಧನ ಮುಂದುವರಿಯುತ್ತಾ ಎಂದು ತಿಳಿಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ