Publish Date: Wed, 07 Mar 2018 (09:42 IST)
Updated Date: Wed, 07 Mar 2018 (09:44 IST)
ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ಈ ವೇಳೆ ಆರೋಪಿ ನಲಪಾಡ್ ಖುದ್ದು ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣಗೆ ಹಾಜರಾಗಲಿದ್ದಾನೆ. ನಲಪಾಡ್ ಮತ್ತು ಇತರ ಆರೋಪಿಗಳಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗುತ್ತಿದೆ.
ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರಿಂದ ನಲಪಾಡ್ ಹೈಕೋರ್ಟ್ ಗೆ ಅರ್ಜಿ ಸಲ್ಲಿದ್ದರು. ಅದರಂತೆ ಏಕಸದಸ್ಯ ಪೀಠ ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ. ನಲಪಾಡ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ