Publish Date: Thu, 14 Jun 2018 (10:48 IST)
Updated Date: Thu, 14 Jun 2018 (10:50 IST)
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಕೊನೆಗೂ ಜಾಮೀನು ಮಂಜೂರು ಮಾಡಲಾಗಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಪೀಠ ಇಂದು ತೀರ್ಪು ಕಾಯ್ದಿರಿಸಿತ್ತು. ಆರೋಪಿ ಪರ-ವಿರೋಧಿ ವಕೀಲರಿಬ್ಬರೂ ಇಂದು ಕೋರ್ಟ್ ಗೆ ಹಾಜರಾಗಿದ್ದರು.
ಅದರಂತೆ ತೀರ್ಪು ನೀಡಿದ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರಿಂದ ಮೂರು ತಿಂಗಳ ನಲಪಾಡ್ ಸೆರೆವಾಸ ಅಂತ್ಯವಾಗಿದೆ. ನಲಪಾಡ್ ಪರ ವಕೀಲ ಬಿವಿ ಆಚಾರ್ಯ ವಾದ ಮಂಡಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.