Publish Date: Wed, 21 Feb 2018 (16:14 IST)
Updated Date: Wed, 21 Feb 2018 (16:17 IST)
ಬೆಂಗಳೂರು: ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಸಂಗಡಿಗರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದು, ಅದಕ್ಕಿಂತ ಮೊದಲು ಆರೋಗ್ಯ ತಪಾಸಣೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬಿಗಿ ಭದ್ರತೆ ನಡುವೆ ಆಸ್ಪತ್ರೆಗೆ ಕರೆ ತಂದ ಪೊಲೀಸರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಇದೀಗ ನಲಪಾಡ್ ಮತ್ತು ಸಂಗಡಿಗರು ಕೋರ್ಟ್ ಗೆ ಹಾಜರಾಗುತ್ತಿದ್ದು, ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ.
ಆದರೆ ಕೊಲೆ ಯತ್ನ ಪ್ರಕರಣ ದಾಖಲಾಗಿರುವುದರಿಂದ ಜಾಮೀನು ಸಿಗುವ ಸಾಧ್ಯತೆ ಕಡಿಮೆಯಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ