Publish Date: Fri, 23 Feb 2018 (08:58 IST)
Updated Date: Fri, 23 Feb 2018 (09:00 IST)
ಬೆಂಗಳೂರು: ಹಲ್ಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಶಾಸಕ ಹ್ಯಾರಿಸ್ ಮೊಹಮ್ಮದ್ ನಲಪಾಡ್ ಮತ್ತೊಂದು ವಿವಾದಕ್ಕೆ ಕಾರಣನಾಗಿದ್ದಾನೆ.
ಜೈಲಿನಲ್ಲಿ ನಿನ್ನೆಯಿಂದ ನಲಪಾಡ್ ಫೋನ್ ಬಳಸುತ್ತಿದ್ದಾನೆ ಎಂದು ಖಾಸಗಿ ವಾಹಿನಿ ವರದಿ ಮಾಡಿದೆ. ನಿನ್ನೆ ಮಧ್ಯರಾತ್ರಿವರೆಗೂ ತನ್ನ ಕುಟುಂಬದವರ ಜತೆಗೆ ಮಾತನಾಡಿದ ಮೊಹಮ್ಮದ್, ಮಧ್ಯಂತರ ಜಾಮೀನು ಅರ್ಜಿ ಸಲ್ಲಿಕೆ ಬಗ್ಗೆ ಮಾತನಾಡಿದನೆಂದು ವಾಹಿನಿ ವರದಿ ಮಾಡಿದೆ.
ಆದರೆ ಮೊಹಮ್ಮದ್ ಗೆ ಅಕ್ರಮವಾಗಿ ಫೋನ್ ಬಳಸಲು ಅನುವು ಮಾಡಿಕೊಟ್ಟವರು ಯಾರೆಂದು ತಿಳಿದುಬಂದಿಲ್ಲ. ನಿನ್ನೆ ಆರೋಪಿಗಳಿಗೆ ಮನೆ ಊಟ ನೀಡಲಾಗಿತ್ತು. ಈ ಊಟದ ಜತೆಗೆ ಗುಪ್ತವಾಗಿ ಮೊಬೈಲ್ ಸಾಗಿಸಿರಬಹುದೇ ಎಂದು ವಾಹಿನಿ ವರದಿ ಶಂಕಿಸಿದೆ. ಅಂತೂ ವಿಐಪಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಐಪಿ ಆತಿಥ್ಯ ಸಿಗುತ್ತದೆ ಎಂಬುದಕ್ಕೆ ಈ ಘಟನೆ ಮತ್ತೊಮ್ಮೆ ಸಾಕ್ಷಿಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ