ಕಾರವಾರ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಶಾಸಕ ಸತೀಶ್ ಸೈಲ್ ಅವರ ಮಧ್ಯಂತರ ಜಾಮೀನು ರದ್ದಾಗಿರುವ ಹಿನ್ನೆಲೆ, ಮತ್ತೇ ಜೈಲು ಪಾಲಾಗಲಿದ್ದಾರೆ.
ಬೆಲೇಕೇರಿ ಬಂದರಿನಿಂದ ಆಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿದ್ದ ಶಾಸಕ ಸತೀಶ್ ಸೈಲ್‌ಗೆ ನ.7 ರ ವರೆಗೆ ಜಾಮೀನು ವಿಸ್ತರಣೆ ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದೀಗ ಸತೀಶ್ ಅವರ ಮಧ್ಯಂತರ ಜಾಮೀನು ರದ್ದಾಗಿರುವ ಹಿನ್ನೆಲೆ ಮತ್ತೇ ಜೈಲು ಸೇರಲಿದ್ದಾರೆ.
ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸತೀಶ್ ಅವರ ಮನೆ ಮೇಲಿನ ಇಡಿ ದಾಳಿ ವೇಳೆಯೂ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆದಿತ್ತು.
ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಸೈಲ್ ಇ.ಡಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದು, ಅ.25 ರವರೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಆರೋಗ್ಯ ಸಮಸ್ಯೆ ಹಾಗೂ ಚಿಕಿತ್ಸೆ ಕಾರಣದಿಂದ ಜಾಮೀನು ವಿಸ್ತರಿಸುವಂತೆ ಸೈಲ್ ಕೋರಿದ್ದ ಅರ್ಜಿಯನ್ನ ಪರಿಗಣಿಸಿದ ಜನಪ್ರತಿನಿಧಿಗಳ ನ್ಯಾಯಾಲಯ ನ.7 ರ ವರೆಗೆ ಜಾಮೀನು ವಿಸ್ತರಿಸಿ ಆದೇಶಿಸಿತ್ತು. ಇದೀಘ ಮತ್ತೇ ಸೈಲ್‌ಗೆ ಜೈಲೇ ಗತಿಯಾಗಿದೆ.