ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

Sampriya
ಶುಕ್ರವಾರ, 7 ನವೆಂಬರ್ 2025 (19:17 IST)
Photo Credit X
ಕಾರವಾರ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಶಾಸಕ ಸತೀಶ್ ಸೈಲ್ ಅವರ ಮಧ್ಯಂತರ ಜಾಮೀನು ರದ್ದಾಗಿರುವ ಹಿನ್ನೆಲೆ, ಮತ್ತೇ ಜೈಲು ಪಾಲಾಗಲಿದ್ದಾರೆ. 

ಬೆಲೇಕೇರಿ ಬಂದರಿನಿಂದ ಆಕ್ರಮ ಅದಿರು ಸಾಗಾಟ ಪ್ರಕರಣ‌ದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿದ್ದ ಶಾಸಕ ಸತೀಶ್ ಸೈಲ್‌ಗೆ ನ.7 ರ ವರೆಗೆ ಜಾಮೀನು ವಿಸ್ತರಣೆ ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದೀಗ ಸತೀಶ್ ಅವರ ಮಧ್ಯಂತರ ಜಾಮೀನು ರದ್ದಾಗಿರುವ ಹಿನ್ನೆಲೆ ಮತ್ತೇ ಜೈಲು ಸೇರಲಿದ್ದಾರೆ. 


ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸತೀಶ್ ಅವರ ಮನೆ ಮೇಲಿನ ಇಡಿ ದಾಳಿ ವೇಳೆಯೂ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆದಿತ್ತು. 

ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಸೈಲ್ ಇ.ಡಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದು, ಅ.25 ರವರೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಆರೋಗ್ಯ ಸಮಸ್ಯೆ ಹಾಗೂ ಚಿಕಿತ್ಸೆ ಕಾರಣದಿಂದ ಜಾಮೀನು ವಿಸ್ತರಿಸುವಂತೆ ಸೈಲ್ ಕೋರಿದ್ದ ಅರ್ಜಿಯನ್ನ ಪರಿಗಣಿಸಿದ ಜನಪ್ರತಿನಿಧಿಗಳ ನ್ಯಾಯಾಲಯ ನ.7 ರ ವರೆಗೆ ಜಾಮೀನು ವಿಸ್ತರಿಸಿ ಆದೇಶಿಸಿತ್ತು. ಇದೀಘ ಮತ್ತೇ ಸೈಲ್‌ಗೆ ಜೈಲೇ ಗತಿಯಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments